ನವದೆಹಲಿ :ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿ, ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತ ಸರ್ಕಾರಕ್ಕೆ ಮನವಿಯನ್ನು ಮಾಡಿದೆ.
ಮಾಧ್ಯಮಗಳಲ್ಲಿ ಅವರ ವೀಸಾ ವಿಸ್ತರಣೆಯ ವರದಿಗಳು ಬಂದ ನಂತರ ಬಾಂಗ್ಲಾದೇಶ ಈ ಬಗ್ಗೆ ಭಾರತವನ್ನು ಒತ್ತಾಯಿಸಿದೆ. ಈಗಾಗಲೇ ಬಾಂಗ್ಲಾದೇಶ ಶೇಖ್ ಹಸೀನಾ ಪಾಸ್ಪೋರ್ಟ್ ಅನ್ನು ರದ್ದುಗೊಳಿಸಿದೆ. ಹೀಗಾಗಿ, ಈ ಬಗ್ಗೆ ಹೇಳಿಕೆ ನೀಡಿರುವ ಬಾಂಗ್ಲಾದ ವಿದೇಶಾಂಗ ಸಚಿವಾಲಯದ ವಕ್ತಾರ ಮೊಹಮ್ಮದ್ ಆಲಂ, ಪಾಸ್ಪೋರ್ಟ್ ರದ್ದಾದ ನಂತರ ವೀಸಾ ವಿಸ್ತರಣೆಗೆ ಯಾವುದೇ ಬೆಲೆ ಇರುವುದಿಲ್ಲ ಎಂದಿದ್ದಾರೆ.
ಅವಾಮಿ ಲೀಗ್ನ ನಾಯಕಿ ಹಸೀನಾ ಕಳೆದ ಆಗಸ್ಟ್ನಲ್ಲಿ ವ್ಯಾಪಕ ಪ್ರತಿಭಟನೆಗಳ ನಡುವೆ ಢಾಕಾದಿಂದ ಪಲಾಯನ ಮಾಡಿದರು. ಅದಾದ ನಂತರ ಅವರು ಭಾರತದಲ್ಲಿ ವಾಸಿಸುತ್ತಿದ್ದಾರೆ.