ನವದೆಹಲಿ : ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ನೀಡಿದ ದೂರಿನ್ವಯ ಬಂಧಿಸಲಾಗಿದೆ.
ನೀರವ್ ಮೋದಿಯ ಸಹೋದರ ನೇಹಲ್ ಮೋದಿಯನ್ನು ಜುಲೈ 4ರಂದು ಅಮೆರಿಕದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಮೆರಿಕದ ನ್ಯಾಯಾಂಗ ಇಲಾಖೆ ಮಾಹಿತಿ ನೀಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002ರ ಸೆಕ್ಷನ್ 3ರ ಅಡಿಯಲ್ಲಿ ಹಣ ವರ್ಗಾವಣೆ ಪ್ರಕರಣ ಮತ್ತು ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 120-ಬಿ ಮತ್ತು 201ರಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ಸಹಕರಿಸಿದ್ದ ಆರೋಪ ಪ್ರಕರಣದಲ್ಲಿ ನೇಹಲ್ ಮೋದಿ ಅವರನ್ನು ಹಸ್ತಾಂತರ ಮಾಡುವಂತೆ ಅಮೆರಿಕದ ಪ್ರಾಸಿಕ್ಯೂಷನ್ ದೂರು ಸಲ್ಲಿಸಲಾಗಿತ್ತು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದ ತನಿಖೆಯಲ್ಲಿ, ನೇಹಲ್ ಮೋದಿಯು ನೀರವ್ ಮೋದಿಯ ಅಕ್ರಮ ಆದಾಯವನ್ನು ಕಾನೂನುಬದ್ಧಗೊಳಿಸಲು ಕೆಲಸ ಮಾಡುತ್ತಿದ್ದ ಪ್ರಮುಖ ವ್ಯಕ್ತಿ ಎಂದು ತಿಳಿದುಬಂದಿದೆ