ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಇನ್ನೂ  3-4 ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

WhatsApp
Telegram
Facebook
Twitter
LinkedIn

 

ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆ ಮಾರುತಗಳ ಪ್ರಭಾವದಿಂದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧೆಡೆ ಮೋಡ ಕವಿದ ವಾತಾವರಣ ಉಂಟಾಗಿದೆ. ಕೆಲವು ಕಡೆ ತುಂತುರು ಮಳೆಯಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗದಲ್ಲಿ ಒಣಹವೆ ಇರಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon