ಬೆಂಗಳೂರು: ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಸರ್ಕಾರ ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದ್ದು, ಇದರನ್ವಯ ದಿನಾಂಕ 28-10-2024ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
