ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ ನಡೆದ ಅಡ್ಡಪಲ್ಲಕ್ಕಿ ಮೆರವಣಿಗೆಯ ವೇಳೆ, ಬಸನಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎನ್ನುವಾತನನ್ನು ಬಂಧಿಸಲಾಗಿದೆ.
ಜನೆವರಿ 21 ರಂದು ಅಡ್ಡಪಲ್ಲಕ್ಕಿ ವೇಳೆ ಏರಪೈರ್ ಮಾಡಿರುವ ವಿಷಯ ವಾಟ್ಸಪ್ ಮೂಲಕ ಗೋತ್ತಾಯಿತು. ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಸಿಂದಗಿ ಮೂಲದ ಬಸನಗೌಡ ಪಾಟೀಲ್ ನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜೊತೆಗೆ ಪೊಲೀಸರು, ಪಿಸ್ತೂಲು ಹಾಗೂ ಜೀವಂತ ಬುಲೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ ಮಾಹಿತಿ ನೀಡಿದ್ದಾರೆ.
































