ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟೆಯ ಹತ್ತುವ ವ್ಯರ್ಥರ ಕಂಡು
ಎನ್ನ ಮನ ನಾಚಿತ್ತು, ನಾಚಿತ್ತು.
ಕೈಲಾಸವೆಂಬುದೇನೊ, ಪೃಥ್ವಿಯ ಮೇಲೊಂದು ಮೊರಡಿ,
ಆ ಪೃಥ್ವಿಗೆ ಲಯವುಂಟು, ಆ ಮೊರಡಿಗೆಯು ಲಯವುಂಟು,
ಅಲ್ಲಿರ್ಪ ಗಂಗೆವಾಳುಕಸಮರುದ್ರರಿಗೂ ಲಯವುಂಟು,
ಇದು ಕಾರಣ,
‘ಯದ್ಧೃಷ್ಟಂ ತನ್ನಷ್ಟಂ’ ಎಂಬ ಶ್ರುತಿಯ ನೋಡಿ ತಿಳಿದು,
ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ
ಕೂಡಲಸಂಗಾ, ನಿಮ್ಮ ಶರಣ.
-ಬಸವಣ್ಣ





























