Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಸವಣ್ಣ ವಚನ ಹಾಗೂ ಬದುಕು ನಮ್ಮೆಲ್ಲರಿಗೂ ಆದರ್ಶಪ್ರಾಯ-ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

0

 

ಚಿತ್ರದುರ್ಗ: ಬಸವಣ್ಣನವರ ವಚನ ಹಾಗೂ ಬದುಕು ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಭಾನುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಮನುಷ್ಯ ಮನುಷ್ಯನೊಂದಿಗೆ ಸಹಜವಾಗಿ ಬದುಕುವುದನ್ನು ಕಲಿಯಲು ಕಷ್ಟಪಡುತ್ತಿದ್ದೇವೆ. ಜಾತಿ, ಧರ್ಮ, ಬೇಧಗಳ ವ್ಯತ್ಯಾಸವಿಲ್ಲದೆ ಎಲ್ಲರೊಂದಿಗೆ ಸಹಜವಾಗಿ ಜೀವನ ನಡೆಸಬೇಕು. ಕಾಯಕವೇ ಕೈಲಾಸ ಎಂಬ ತತ್ವ ಪಾಲಿಸಬೇಕು ಎಂದು ಬಸವಣ್ಣ 850 ವರ್ಷಗಳ ಹಿಂದೆಯೇ ಹೇಳಿದರು. ಬಸವಣ್ಣ ತೋರಿದ ಮಾರ್ಗದಲ್ಲಿ ನಾವೆಲ್ಲರೂ ನಡೆಯಲು ಪ್ರಯತ್ನಿಸಿದರೆ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.

ಕರ್ನಾಟಕ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಬಸವಣ್ಣನವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಸತ್ಯನಾರಾಯಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ವೀರಶೈವ ಸಮಾಜದ ಕಾರ್ಯದರ್ಶಿ ವಿಶ್ವನಾಥ್, ವೀರಶೈವ ಮಹಾಸಭಾ ಅಧ್ಯಕ್ಷ ಮಹಡಿ ಶಿವಮೂರ್ತಿ, ಖಜಾಂಚಿ ಶರಣಯ್ಯ, ವೀರಶೈವ ಸಮಾಜದ ನಿರ್ದೇಶಕ ಪ್ರಕಾಶ್, ಸಮಾಜದ ಮುಖಂಡರಾದ ನಾಗರಾಜ್ ಸಂಗಮ್, ರವಿಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಕಾಶ್, ಕಾರ್ಯದರ್ಶಿ ಜಿ.ಎನ್.ಮಹೇಶ್, ತಾಲ್ಲೂಕು ಅಧ್ಯಕ್ಷ ರುದ್ರೇಶ್ ಐಗಳ್, ನಿರ್ದೇಶಕರಾದ ಮೋಕ್ಷರುದ್ರಸ್ವಾಮಿ, ವೀರಶೈವ ಮಹಾಸಭಾ ನಗರ ಘಟಕ ಅಧ್ಯಕ್ಷ ಆನಂದ್, ಅಖಿಲ ಭಾರತ ಮಹಾಸಭಾ ಮಹಿಳಾ ಘಟಕ ಅಧ್ಯಕ್ಷ ನಿರ್ಮಲ ಬಸವರಾಜ್, ವೀರಶೈವ ಮಹಾಸಭಾ ರಾಜ್ಯ ಪ್ರತಿನಿಧಿ ಆರತಿ ಮಹಡಿ ಶಿವಮೂರ್ತಿ, ಸಮಾಜ ಜಿಲ್ಲಾ ನಿರ್ದೇಶಕ ಶಶಿಧರ್, ನಗರ ಘಟಕ ನಿರ್ದೇಶಕ ಧನಂಜಯ್, ಶಿವಶಿಂಪಿ ಸಮಾಜ ಅಧ್ಯಕ್ಷೆ ಅನಿತಾ ಕುಮಾರಿ, ನಿವೃತ್ತ ನೌಕರರ ಸಂಘಟನಾ ಕಾರ್ಯದರ್ಶಿ ಎಂ.ರಂಗಪ್ಪ, ಸಮಾಜದ ಮುಖಂಡ ಮಲ್ಲಿಕಾರ್ಜುನ್ ಸೇರಿದಂತೆ ಇತರರು ಇದ್ದರು. ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ನಿರೂಪಿಸಿದರು.

ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

Leave A Reply

Your email address will not be published.