ಮುಂಬೈ: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಭಾರತ ಗೆಲುವು ಸಾಧಿಸಿದ ಬಳಿಕ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ. ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಮಾರ್ಚ್ 9 ರಂದು ನಡೆದ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.
ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಐಸಿಸಿ 20 ಕೋಟಿ ರೂ. ನೀಡಿದರೆ, ರನ್ನರ್ ಅಪ್ ನ್ಯೂಜಿಲೆಂಡ್‌ಗೆ 1.12 ಮಿಲಿಯನ್ ಡಾಲರ್ (9.72 ಕೋಟಿ ರೂ.) ನಗದು ಬಹುಮಾನ ನೀಡಿದೆ.