ಬಳ್ಳಾರಿ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್ ಹಾಗೂ ಗುರುಚರಣ ಸಿಂಗ್ ಬಂಧಿತ ಗನ್ ಮ್ಯಾನ್ ಗಳು. ಜನವರಿ 1ರಂದು ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ ಈ ಮೂವರು ಗನ್ ಮ್ಯಾನ್ ಗಳು ಫೈರಿಂಗ್ ನಡೆಸಿದ್ದರು. ಮೂವರೂ ಪಂಜಾಬ್ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರನ್ನೂ ಬಂಧಿಸಲಾಗಿದೆ. ಮೂವರು ಗನ್ ಮ್ಯಾನ್ ಗಳು ಸೇರಿ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
































