ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಉಚಿತವಾಗಿ ಕಣ್ಣಿನ ಪೊರೆ(cataract) ಕಣ್ಣಿನ ಶಸ್ತ್ರ ಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯ ಹಿರಿಯ ನಾಗರಿಕರು ಶಿಬಿರಗಳಲ್ಲಿ ಭಾಗವಹಿಸಿ ಸೌಲಭ್ಯದ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 080-27622030-1090 ದೂ.ಸಂಖ್ಯೆಗೆ ಕರೆ ಮಾಡಿ ಅಥವಾ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ಉಪಾಧೀಕ್ಷಕರ ಕಚೇರಿ ಆವರಣ, ದೊಡ್ಡಬಳ್ಳಾಪುರ ಟೌನ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.