ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಪುಟ್ಟ ಹುಡುಗಿಯೊಬ್ಬಳು ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಗರದ ಅಭಿರೂಪ್ ಎಂಬವರ ಐದು ವರ್ಷದ ಪುತ್ರಿ ಆರ್ಯ ಪ್ರಧಾನಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಬೆಂಗಳೂರಿನ ಸಂಚಾರ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಿದ್ದಾಳೆ.
ಬೆಂಗಳೂರಿನಲ್ಲಿ ವಿಪರೀತ ಟ್ರಾಫಿಕ್ ಇದ್ದು, ಇದರಿಂದ ಶಾಲೆ ಮತ್ತು ಕಾಲೇಜುಗಳಿಗೆ ತಲುಪುವುದು ತಡವಾಗುತ್ತಿದೆ. ರಸ್ತೆ ತುಂಬಾ ಕೆಟ್ಟದಾಗಿದ್ದು, ಈ ಸಮಸ್ಯೆಯನ್ನು ಪರಿಹರಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾಳೆ.