ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಡಿ ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ತಿಳಿಸಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಅವರು ನಂತರ ಗಣರಾಜ್ಯೋತ್ಸವ ಸಂದೇಶ ನೀಡಿದರು.
ಯೋಜನೆಯ ಬಾಕಿ ಕಾಮಗಾರಿಗಳಿಗಾಗಿ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸರ್ಕಾರ ಭರವಸೆ ನೀಡಿದೆ. ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕುಗಳ ಒಟ್ಟು 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ 2677 ಕೋಟಿ ರೂ.ಗಳ ಬೃಹತ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.
ಶಾಸಕ ಕೆ.ಎಸ್.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಭೋವಿ ನಿಗಮದ ಅಧ್ಯಕ್ಷ ವಿ.ರಾಮಪ್ಪ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರಿದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಡಾ.ಆಕಾಶ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

































