ಚಿತ್ರದುರ್ಗ: ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಇದೇ ಜ.12 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
































