ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ರವಿಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ 60% ಲಂಚ ಕೇಳಿದ್ದಂತ ವಿಡಿಯೋ ವೈರಲ್ ಆಗಿತ್ತು.
ಈ ವೈರಲ್ ವಿಡಿಯೋ ಗಮನಿಸಿದ್ದಂತ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಜೊತೆಗೆ ರಾಜೀನಾಮೆಗೂ ಸೂಚಿಸಿದ್ದರು. ಈ ಬೆನ್ನಲ್ಲೇ ಅವರು ರಾಜೀನಾಮೆ ಈಗ ನೀಡಿದ್ದಾರೆ ಎಂದು ತಿಳಿದುಬಂದಿದೆ.