ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲವೆಂದು ವರದಿಯನ್ನು ಅಂಗೀಕರಿಸಿದೆ.
ಈಶ್ವರಪ್ಪ ಸಚಿವರಾಗಿದ್ದಾಗ ಗುತ್ತಿಗೆದಾರ ಸಂತೋಷ್ ಅವರು ಕಳೆದ ವರ್ಷ ಏಪ್ರಿಲ್ 12ರಂದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.