ಪಾಟ್ನಾ : ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ಮುಗಿದಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ.
ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ರಾಜ್ಯದ 46 ಮತಗಟ್ಟಗಳಲ್ಲಿ ಮತ ಎಣಿಕೆ ಶುರುವಾಗಿದೆ. ಎರಡೂ ಪಕ್ಷಗಳು ಗ್ಯಾರಂಟಿಗಳ ಮಹಾಪೂರವನ್ನೇ ಹರಿಸಿದ್ದವು. ಬಿಹಾರ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.
ಅಂಚೆ ಮತ ಎಣಿಕೆಯಲ್ಲಿ ಎನ್‌ಡಿಎಗೆ 47, ಮಹಾಘಟಬಂಧನ್ 26, ಜನಸೂರಜ್ 3, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಎನ್‌ಡಿಎ ಮತ್ತು ಮಹಾಮೈತ್ರಿಕೂಟದ ನಡುವಿನ ಅಂತರ ಹೆಚ್ಚಾಗಿದೆ. ಎನ್‌ಡಿಎ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೆ, ಮಹಾಘಟಬಂಧನ್ 43 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದಾಗ್ಯೂ, ಬಿಜೆಪಿ ಮತ್ತು ಆರ್‌ಜೆಡಿ ಪರಸ್ಪರ ಪೈಪೋಟಿ ನಡೆಸುತ್ತಿದ್ದು, ತಲಾ 35 ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ.































