ಬೆಂಗಳೂರು: 12, 2026 ರಂದು ರಾಜ್ಯಾದ್ಯಂತ ಒಂದು ದಿನದ ಬಿಸಿಯೂಟ ನೌಕರರ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಬರುವ ಫೆಬ್ರವರಿ ಕರೆ ನೀಡಿದೆ.
ಹೌದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬಿಸಿಯೂಟ ನೌಕರರು ಫೆಬ್ರವರಿ 12, 2026 ರಂದು ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದಾರೆ. ಮುಷ್ಕರದ ದಿನದಂದು ಶಾಲಾ ಮಕ್ಕಳಿಗೆ ಬಿಸಿಯೂಟದ ವಿತರಣೆಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಪರ್ಯಾಯ ವ್ಯವಸ್ಥೆಗೆ ಆದೇಶ
ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಪೌಷ್ಟಿಕ ಆಹಾರ ಯೋಜನೆಗೆ ಅಡ್ಡಿಯಾಗಬಾರದು ಎಂದು ಪಿ.ಎಂ. ಪೋಷಣ್ ಶಕ್ತಿ ನಿರ್ಮಾಣ್ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆ, ಬಿಸಿಯೂಟ ಯೋಜನೆ ಮತ್ತು ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಪೂರಕ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಶಿಕ್ಷಣಾಧಿಕಾರಿಗಳಿಗೆ ತಿಳಿಸಲಾಗಿದೆ.
ಕುರಿತು ಶಾಲಾ ಮುಖ್ಯ ಶಿಕ್ಷಕರು ಅಡುಗೆ ಸಿಬ್ಬಂದಿಗಳಿಗೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಮನವೊಲಿಸುವ ಪ್ರಯತ್ನ ಮಾಡಬೇಕೆಂದು ತಿಳಿಸಲಾಗಿದ್ದು, ಒಂದು ವೇಳೆ ಮುಷ್ಕರ ನಡೆದರೆ ಪರ್ಯಾಯ ಮಾರ್ಗಗಳ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಲು ಸೂಚಿಸಲಾಗಿದೆ.
































