ಅಥಣಿ: ರಾಜ್ಯದಲ್ಲಿ BJP ಲೀಡರ್ ಲೆಸ್ ಪಾರ್ಟಿಯಾಗಿದೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.
ಬಿಜೆಪಿಯ 8 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ನೀಡಿರುವ ಹೇಳಿಕೆ ನಿಜ ಎಂದಿದ್ದಾರೆ.
ಸಣ್ಣಪುಟ್ಟ ವೈಮನಸ್ಸು ಸರಿಪಡಿಸುವ ಸಾಮರ್ಥ್ಯ ಕೂಡ ಬಿಜೆಪಿಯಲ್ಲಿ ಯಾರಿಗೂ ಇಲ್ಲ. ಬಿಜೆಪಿ ನಾಯಕರೇ ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಬಿಜೆಪಿ ನಶಿಸಿ ಹೋಗುವ ಥರ ಕಾಣಿಸುತ್ತಿದೆ ಎಂದು ಭವಿಷ್ಯ ನುಡಿದಿದ್ದಾರೆ.