ಬೆಂಗಳೂರು: ಎಐಸಿಸಿ ಅಧ್ಯಕ್ಷ ಖರ್ಗೆ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಲಿತ ಕುಟುಂಬದಲ್ಲಿ ಜನಿಸಿದ ಖರ್ಗೆ ಅವರು ಪರಿಶ್ರಮದ ಮೂಲಕ ಒಂಬತ್ತು ಬಾರಿ ನಿರಂತರವಾಗಿ ಗೆಲುವು ಸಾಧಿಸಿ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ಎಐಸಿಸಿ ಅಧ್ಯಕ್ಷ ಸ್ಥಾನದವರೆಗೆ ಏರಿದ್ದಾರೆ. ಬಿಜೆಪಿ ಎಂದಿಗೂ ದಲಿತರನ್ನು ಅಧ್ಯಕ್ಷರನ್ನಾಗಿ ಮಾಡುವುದಿಲ್ಲ ಎಂದಿದ್ದಾರೆ.