‘ಇವಿಎಂ ಇರುವ ತನಕ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲುತ್ತದೆ’- ಪರಮೇಶ್ವರ್

WhatsApp
Telegram
Facebook
Twitter
LinkedIn

ಬೆಂಗಳೂರು : ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ಸ್ಟ್ರಾಟಜಿ ಮಾಡುವುದರಲ್ಲೂ ನಾವು ಫೇಲ್ ಆಗಿದ್ದೇವೆ. ಇವಿಎಂ ಇರುವ ತನಕ ಅವರೇ ಗೆಲ್ಲುತ್ತಾರೆ ಅನ್ನಿಸುತ್ತದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ನಾವು ಅಗಾಡಿ ಬರುತ್ತದೆ ಎಂದುಕೊಂಡಿದ್ದೆವು. ಆದರೆ ಎಲ್ಲವೂ ಉಲ್ಟಾ ಆಗಿದೆ. ಅಶೋಕ್ ಗೆಹ್ಲೋಟ್, ಭಗೇಲ್ ಸೇರಿ ಅನುಭವಿ ಸಿಎಂಗಳು ಚರ್ಚೆ ಮಾಡಿದ್ದೇವೆ. ಬಹಳಷ್ಟು ಕಡೆ ಇವಿಎಂ ಮ್ಯಾನಿಪ್ಯುಲೆಟ್ ಮಾಡಿದ್ದಾರೆ ಎಂದು ಚರ್ಚೆ ಆಗಿದೆ. ಆದ್ರೆ ಜಾರ್ಖಂಡ್‌ನಲ್ಲಿ ಯಾಕೆ ಹಾಗಾಗಲಿಲ್ಲ? ಬಿಜೆಪಿಯವರು ಪ್ಲ್ಯಾನ್ ಆಫ್ ಆಕ್ಷನ್ ರೀತಿ ಇದನ್ನು ಮಾಡ್ತಾರೆ ಎಂದರು.

ನAಬಿಕೆ ಬರಬೇಕು ಅಂತ ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ. ಬ್ಯಾಲೆಟ್ ಪೇಪರ್ ಬರಬೇಕು ಅಂತ ನಾವು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಹಳಷ್ಟು ಕಡೆ ಇವಿಎಂ ಮ್ಯಾನಿಪ್ಯುಲೆಟ್ ಮಾಡಿದ್ರು ಅಂತ ಚರ್ಚೆ ನಡೆಯಿತು. ಜಾರ್ಖಂಡ್‌ನಲ್ಲಿ ಯಾಕೆ ಮಾಡಿಲ್ಲ ಅಂದ್ರೆ ಕೆಲವು ಕಡೆ ಬಿಟ್ಟು ಬಿಡ್ತಾರೆ. ರಾಜ್ಯದಲ್ಲಿ ಕೆಲವು ಗೆದ್ದೆ ಗೆಲ್ತಿವಿ ಅನ್ನೋ ಕಡೆ ಬಿಡ್ತಾರೆ. ಇದರೊಂದಿಗೆ ಲಾಡ್ಲಿ ಬೆಹಿನ್ ಯೋಜನೆ ಸಾಕಷ್ಟು ಇಂಪ್ಯಾಕ್ಟ್ ಅಗಿದೆ. ಅವರು 6 ತಿಂಗಳು ಮೊದಲು ಕೊಟ್ಟರು, ಇದೆಲ್ಲವೂ ಅವರ ಕೈ ಹಿಡಿದಿದೆ. ನಾವು ಕೊನೆಗೆ ಟಿಕೆಟ್ ಘೋಷಣೆ ಮಾಡಿದ್ವಿ. ಪಕ್ಷದಲ್ಲೂ ಗೊಂದಲ ಆಯ್ತು. ಶರದ್ ಪವಾರ್ ಗುಂಪು, ಉದ್ದವ್ ಠಾಕ್ರೆ ಗುಂಪಿನ ನಡುವೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ವಿದರ್ಭದಲ್ಲಿ ಹೆಚ್ಚು ಸೀಟ್ ಬರಲಿಲ್ಲ. ಎಲ್ಲಿಯವರೆಗೆ ಇವಿಎಂ ಇರುತ್ತೆ ಅಲ್ಲಿಯವರೆಗೆ ಕಾಂಗ್ರೆಸ್ ಬರೋದು ಕಷ್ಟ ಆಗುತ್ತೆ ಎಂದು ಹೇಳಿದರು.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon