ದಾಬಸ್ ಪೇಟೆ: ಕಂಬಾಳು ಸಂಸ್ಥಾನ ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿಗೆ ಮಂಗಳೂರಿನ ಯುವತಿಯೋರ್ವಳು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಬಗ್ಗೆ ತುಮಕೂರಿನ ದಾಬಸ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
2020ರಲ್ಲಿ ವರ್ಷಾ ಎಂಬ ಯುವತಿ ಸ್ವಾಮೀಜಿಗೆ ಪರಿಚಯವಾಗಿದ್ದು ಆ ಬಳಿಕ ಬೇರೆ ಬೇರೆ ಕಾರಣಗಳನ್ನು ಹೇಳಿ ಈಕೆ ಲಕ್ಷಗಟ್ಟಲೆ ಹಣ ಪಡೆದುಕೊಂಡಿದ್ದಳು. ಈಗ ₹55 ಲಕ್ಷಕ್ಕೆ ಬೇಡಿಕೆ ಇಟ್ಟ ಈಕೆ ಕೊಡದಿದ್ದರೆ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾಳೆ ಎಂದು ವರದಿಯಾಗಿದೆ.