ನವದೆಹಲಿ : ಬೈಕ್ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ತಮ್ಮ ಬೈಕ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ.
ಅಪಘಾತದಲ್ಲಿ ನವತೋಜ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.