ಉಡುಪಿ: ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆ ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್ ಭೇಟಿ ನೀಡಿದರು.
ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ, ಉಚ್ಚಂಗಿ ಸ್ವರ್ಣ ಪೀಠವನ್ನು ಕಂಡು ಪುಳಕಿತಗೊಂಡರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ದೇವರ ಪ್ರಸಾದ ನೀಡಿ ಗೌರವಿಸಿದರು.
ಗೌರವಾಧ್ಯಕ್ಷ ರವಿ ಸುಂದರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಮೊದಲಾದವರಿದ್ದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ 7ನೇ ದಿನದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.