ಉಡುಪಿ : ಉಡುಪಿಯ ಶಾರದಾ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಪತ್ತೆ ದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿಯ ಶಾರದಾ ಶಾಲೆಗೆ ಇ-ಮೇಲ್ ಮೂಲಕ ಅಪರಿಚಿತರಿಂದ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಕ್ಷಣವೇ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ದಳ, ಶ್ವಾನ ದಳದ ಸಿಬ್ಬಂದಿ ಶಾಲೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ.
ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಎಂಜಿಎಂ ರಸ್ತೆ ಬಳಿಯ ಶಾರದಾ ಶಾಲೆ ಸುತ್ತಮುತ್ತ ಬಿಗಿ ಭದ್ರತೆಕೈಗೊಳ್ಳಲಾಗಿದೆ.