ಲಕ್ನೋ: ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ಅನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಮಂಗಳವಾರ ಉತ್ತರ ಪ್ರದೇಶ ಪ್ರವಾಸೋದ್ಯಮದ ಪ್ರಾದೇಶಿಕ ಕಚೇರಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ತಾಜ್ ಮಹಲ್ ಆವರಣದಲ್ಲಿ ಭಾರಿ ಭದ್ರತಾ ಕಲ್ಪಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಆವರಣದಲ್ಲಿ ಶೋಧ ನಡೆಸಿದರೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಎಸಿಪಿ ಸೈಯದ್ ಅರೀಬ್ ಅಹ್ಮದ್ ದೃಢಪಡಿಸಿದ್ದಾರೆ. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುತ್ತಿರುವ ಚಿತ್ರಗಳನ್ನು ಎಎನ್ಐ ಹಂಚಿಕೊಂಡಿದ್ದು, ನಂತರ ಪೊಲೀಸರು ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದ್ದಾರೆ.