ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಮೇ ತಿಂಗಳ ಹಣ ಜಮಾ ಮಾಡಲಾಗುವುದು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 5 ಕೆ.ಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ಒಟ್ಟು 170 ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಪಾವತಿಸುವುದನ್ನು ಮುಂದುವರೆಸಿದೆ.
ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.