ಕಲಬುರಗಿ : ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ಶಾಸಕ ಬಿಆರ್ ಪಾಟೀಲ್ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದರು.