ಬೆಂಗಳೂರು : ಸಂತ್ರಸ್ತೆ ಕಿಡ್ನಾಪ್ ಕೇಸ್‌ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಪುತ್ರನ ಬೆನ್ನಲ್ಲೆ ತಾಯಿಗೆ ಈಗ ಸಂಕಷ್ಟ ಶುರುವಾಗಿದೆ.
ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್‌ನಿಂದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ವಜಾಗೊಳಿಸಿ ಆದೇಶಿಸಲಾಗಿದೆ. ಈಗ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿದೆ.