ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗೆ 30.50 ರೂಪಾಯಿ ಇಳಿಕೆಯಾಗಿದೆ. ಏಪ್ರಿಲ್ 1ರಿಂದ ದೆಹಲಿಯಲ್ಲಿ ಬೆಲೆ 1764.50 ಕ್ಕೆ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಮಾರ್ಚ್ 1ರಂದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳಲ್ಲಿ ಹೆಚ್ಚಳವನ್ನು ಘೋಷಿಸಿದವು.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಗೃಹಬಳಕೆಯ 14 ಕೆ.ಜಿ ಯ ಸಿಲಿಂಡರ್‌ಗಳ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು.
ಇದು ಮಹಿಳಾ ದಿನಾಚರಣೆಯ ಉಡುಗೊರೆಯೂ ಆಗಲಿದೆ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದರು. ‘ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ಇದು ಗಮನಾರ್ಹವಾಗಿ ತಗ್ಗಿಸಲಿದೆ ಮತ್ತು ನಾರಿ ಶಕ್ತಿಗೆ ಪ್ರಯೋಜನವಾಗಲಿದೆ’ ಎಂದು ಅವರು ಹೇಳಿದ್ದರು.