ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷದಿಂದ ಪ್ರಜ್ವಲ್‌ನನ್ನು ಉಚ್ಛಾಟನೆ ಮಾಡಿರೋದಾಗಿ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಸದ್ಯ ತಮ್ಮ ಮೇಲಿನ ಆರೋಪಗಳ ಕುರಿತು ಹಲವಾರು ವಿಡಿಯೋಗಳು ಬಹಿರಂಗಗೊಳ್ಳುತ್ತಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ.