ಹೈದರಬಾದ್: ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ಹಾಗೂ ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ (87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.
ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ 4:50ಕ್ಕೆ ಕೊನೆಯುಸಿರೆಳೆದರು.