ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ ಮಾಡಲಾಗಿದೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ.
ಗುಂಡಿಕ್ಕಿ ಇಬ್ಬರನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಒಬ್ಬರನ್ನು ಕಾರಿನಲ್ಲಿ ಹತ್ಯೆ ಮಾಡಲಾಗಿದ್ದು, ಕಾರಿನ ಬಳಿ ಮತ್ತೊಬ್ಬರ ಕೊಲೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿಗಳ ಪತ್ತೆ ಪೊಲಿಸರು ಮುಂದಾಗಿದ್ದಾರೆ.