ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ನ.28ಕ್ಕೆ ಮುಂದೂಡಿದೆ.
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ವಾದ ಪ್ರತಿವಾದಗಳು ಜರುಗಿದವು. ಪೊಲೀಸರು ಸಲ್ಲಿಸಿದ್ದ ಚಾರ್ಜ್ಶೀಟ್ನ್ನು ಉಲ್ಲೇಖ ಮಾಡಿ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ವಾದವನ್ನು ಮಂಡಿಸಿದರು. ಈಗಾಗಲೇ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.