ಹಾಸನ: ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತ ವಾಗಿದೆ. ಬೆಂಗಳೂರು ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಶಾಂತಿಗ್ರಾಮ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಖಾಸಗಿ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ಸ್ಥಳಕ್ಕೆ ಸಂಭಂಡಪಟ್ಟ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದು ಹಿಂಬದಿಯಿಂದ ಡಿಕ್ಕಿ ಹೊಡೆದ ಇನೋವಾ ಕಾರಿನ ಮುಂಬಾಗ ನಜ್ಜುಗುಜ್ಜಾಗಿದೆ
