ಬೆಂಗಳೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರು ಸೂಚನೆ ನೀಡಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದಿದ್ದ ಸಚಿವರಿಗೆ ಸಂಕಷ್ಟ ಎದುರಾಗಿದೆ.
