ಬೆಂಗಳೂರು: ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಾಗೂ ಎನ್‌ಡಿಎ ನೇತೃತ್ವದಲ್ಲಿ ಪಾದಯಾತ್ರೆ ಶನಿವಾರ (ಆಗಸ್ಟ್ 3) ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿ ರಾಜ್ಯ ಸರಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯದ ವಿರುದ್ಧ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್‌ದಾಸ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.
