ನವದೆಹಲಿ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯುತ್ತಿರುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಈಶ್ವರನ ಮೇಲೆ ಪ್ರಮಾಣ ಸ್ವೀಕರಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
