ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

































