ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಬಿಸಿ ತಂದೆ ಎಚ್.ಡಿ. ರೇವಣ್ಣ ಬೆನ್ನಲ್ಲೇ ತಾಯಿ ಭವಾನಿ ರೇವಣ್ಣಗೂ ತಟ್ಟಿದೆ.
ಹೌದು. ಸಂಸದ ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದರಲ್ಲಿ ಇರುವ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ಭವಾನಿ ರೇವಣ್ಣ ಅವರಿಗೆ ನೋಟೀಸ್ ನೀಡಿದೆ.
ಸಂತ್ರಸ್ತೆ ಕಿಡ್ನಾಪ್ ಪ್ರಕರಣವು ಕೆ.ಆರ್ ನಗರದಲ್ಲಿ ದಾಖಲಾಗಿತ್ತು. ಪ್ರಕರಣದ ತನಿಖೆಯಲ್ಲಿ ಭವಾನಿ ಹೆಸರು ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಭವಾನಿ ಕೋರ್ಟ್ ನಲ್ಲಿ ಈಗಾಗಲೇ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಭವಾನಿಗೆ ಎಸ್‌ಐಟಿ ನೋಟೀಸ್ ನೀಡಿದೆ.