ಶಿಮ್ಲಾ: ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ವರದಿ ನಂತರ ಹಿಮಾಚಲ ಮುಖ್ಯಮಂತ್ರಿ, “ನಾನು ಯಾವುದೇ ರಾಜೀನಾಮೆ ನೀಡಿಲ್ಲ.
ರಾಜೀನಾಮೆ ನೀಡುವಂತೆ ನನಗೆ ಯಾರೂ ಒತ್ತಡ ಹೇರಿಲ್ಲ. ನಾನೊಬ್ಬ ಯೋಧ. ನನ್ನ ಹೋರಾಟ ಮುಂದುವರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರೆಯಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆಗೆ ಮುಂದಾದಿದ್ದಾರೆ ಎನ್ನಲಾಗಿತ್ತು. ಅಲ್ಲದೇ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಅವರು ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.