ನವದೆಹಲಿ: ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನರಾಗಿದ್ದಾರೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನ ಆಗಸ್ಟ್ 19 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 72 ವರ್ಷದ ನಾಯಕ ತೀವ್ರ ಉಸಿರಾಟದ ಸೋಂಕಿಗೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್)ನ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ ಯೆಚೂರಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಪದವಿಯ ಸಮಯದಲ್ಲಿ ಅಧ್ಯಯನ ಮಾಡಿದರು ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನ ಪೂರ್ಣಗೊಳಿಸಿದರು. ಅವರು ಪತ್ನಿ ಸೀಮಾ ಚಿಸ್ತಿ ಯೆಚೂರಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ