ಶಿವಮೊಗ್ಗ : ಬಿಜೆಪಿ ನನಗೆ ತಾಯಿ ಇದ್ದಂತೆ. ಯಡಿಯೂರಪ್ಪ ಪಕ್ಷ ಬಿಟ್ಟು ಕೆಜೆಪಿ ಕಟ್ಟಿದರು. ನಾನು ಯಾವತ್ತೂ ಪಕ್ಷ ಬಿಟ್ಟು ಹೋಗುವ ಬಗ್ಗೆ ಕಿಂಚಿತ್ತೂ ಯೋಚಿಸಿರಲಿಲ್ಲ. ಈಗ ಅಪ್ಪ-ಮಕ್ಕಳ ಷಡ್ಯಂತ್ರದಿಂದ ತಾತ್ಕಾಲಿಕವಾಗಿ ಪಕ್ಷದಿಂದ ಹೊರಗಿದ್ದೇನೆ. ಚುನಾವಣೆ ಬಳಿಕ ಯಡಿಯೂರಪ್ಪನೇ ಬಂದು ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನೇ ಕರೆದುಕೊಂಡು ಬಂದು ಲೋಕಸಭೆಗೆ ಟಿಕೆಟ್ ಕೊಡಿಸಿದ್ದಾರೆ. ಪಕ್ಷ ಕಟ್ಟಿ ಬೆಳೆಸಿದ ನನ್ನನ್ನು ಬಿಜೆಪಿಯಿಂದ ದೂರ ಮಾಡಲು ಆಗಲ್ಲ. ನನ್ನನ್ನು ಪಕ್ಷದಿಂದ ಹೊರಹಾಕಬೇಕು ಎಂದು ಅಪ್ಪ-ಮಕ್ಕಳು ಬಹಳ ಪ್ರಯತ್ನ ಮಾಡಿದ್ದರು. ಈಗ ಅವರಿಗೆ ಸಮಾಧಾನವಾಗಿದೆ. ಆದರೆ, ನನ್ನ ಜನ್ಮ ಇರೋವರೆಗೂ ಕಾಂಗ್ರೆಸ್‌ಗೆ ಹೋಗಲ್ಲ. ಈ ಉಚ್ಚಾಟನೆ ತಾತ್ಕಾಲಿಕ ಮಾತ್ರ. ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಬಿಜೆಪಿ ಸೇರುತ್ತೇನೆ ಎಂದರು. ಮೋದಿ ಟೀಕಿಸಿದರೆ ಕಾಂಗ್ರೆಸ್‌ಗೆ ಸಿಗೋದು ಚೊಂಬು: ಈಶ್ವರಪ್ಪ ಶಿವಮೊಗ್ಗ
: ಪ್ರಧಾನಿ ಮೋದಿಯನ್ನು ಕಾಂಗ್ರೆಸ್ಸಿಗರು ಟೀಕಿಸಿದರೆ ರಾಜ್ಯದ 28 ಕ್ಷೇತ್ರಗಳಲ್ಲಿ ಅವರಿಗೆ ಸಿಗುವುದು ಚೊಂಬು ಎಂದು ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಳಿ ಹಿಂದೂ ಮಹಿಳೆಯರ ಪವಿತ್ರ ಸಂಕೇತ. ಮೋದಿ ಏಕೆ ಹೇಳಿದ್ದಾರೆ ಗೊತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಏಕೆ ಹೇಳಿದ್ದಾರೋ ಗೊತ್ತಿಲ್ಲ. ಮೋದಿ ಹೇಳಿಕೆ ಬಗ್ಗೆ ಚರ್ಚೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ವಿಜಯೇಂದ್ರ ಹಣೆಯಲ್ಲಿನ ಕುಂಕುಮ ಅಳಿಸಿಕೊಂಡ ವಿಡಿಯೋ ವೈರಲ್ ಆಗಿದೆ.
ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಟಿಪ್ಪು ಸುಲ್ತಾನ್ ಟೋಪಿ ಹಾಕಿದ್ದರು. ವಿಜಯೇಂದ್ರ ಯಾವಾಗ ಬೇಕಾದರೂ ಕುಂಕುಮ ತೆಗೆಯುತ್ತಾರೆ. ಯಾವಾಗ ಬೇಕಾದರೂ ಹಚ್ಚಿಕೊಳ್ಳುತ್ತಾರೆ. ಅದೇ ರೀತಿ ಶಿವರಾಜಕುಮಾರ್, ಗೀತಾ ಕುಂಕುಮ ಅಳಿಸಿ ಹಾಕಿದ್ದನ್ನು ಪ್ರಶ್ನೆ ಮಾಡುತ್ತೇನೆ. ಇವರೆಲ್ಲರೂ ಹಿಂದೂ ಸಮಾಜದ ಬಳಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು