ಬೆಂಗಳೂರು: ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ವಿಶೇಷ ನ್ಯಾಯಾಲಯ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್, ಷರತ್ತು ಬದ್ಧ ಜಾಮೀನು ನೀಡಿದೆ.
ಕೆಐಎಡಿಬಿ, ಮೂಲಸೌಕರ್ಯ ಕಾರಿಡಾರ್ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡ 17.18 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣ ಇದಾಗಿದೆ. ಚುನಾವಣಾ ಸಮಯದಲ್ಲಿ ಈ ಆದೇಶ ಬಂದಿರುವುದು ಬಿಜೆಪಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.