ಚಿತ್ರದುರ್ಗ : ನಿಮ್ಮಲ್ಲಿರುವ ಕೌಶಲ್ಯ, ಪರಿಣಿತಿಯನ್ನು ಬಳಸಿ ಶಾಲೆಯಲ್ಲಿ ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠ ಬೋಧಿಸಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಶಿಕ್ಷಕರುಗಳಿಗೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲೆಯ ಇಂಗ್ಲಿಷ್ ಶಿಕ್ಷಕರುಗಳ ಕ್ಲಬ್ ಸಹಯೋಗದೊಂದಿಗೆ ತ.ರಾ.ಸು.ರಂಗಮಂದಿರದಲ್ಲಿ ಜಿಲ್ಲೆಯ ಪ್ರೌಢಶಾಲೆಯ ಆಂಗ್ಲ ಶಿಕ್ಷಕರುಗಳಿಗೆ ಶುಕ್ರವಾರ ಏರ್ಪಡಿಸಲಾಗಿದ್ದ ಕಾರ್ಯಾಗಾರ ಉದ್ಗಾಟಿಸಿ ಮಾತನಾಡಿದರು.
ಶಿಕ್ಷಕರುಗಳ ಮೇಲೆ ಒತ್ತಡವಿದೆ ನಿಜ. ಆದರೆ ಎಂದಿಗೂ ನೀವುಗಳು ಒತ್ತಡ ಅಂದುಕೊಳ್ಳಬಾರದು. ಸಮಾಜದಲ್ಲಿ ಅತ್ಯಂತ ತೃಪ್ತಿ ಕೊಡುವ ವೃತ್ತಿ ಯಾವುದಾದರೂ ಇದ್ದರೆ ಅದು ಶಿಕ್ಷಕ ವೃತ್ತಿ ಮಾತ್ರ. ಸಂಸ್ಕಾರಯುತ ಮಕ್ಕಳನ್ನು ಸಮಾಜಕ್ಕೆ ಕೊಡುವ ಅವಕಾಶ ಶಿಕ್ಷಕರುಗಳ ಕೈಯಲ್ಲಿದೆ. ಮಕ್ಕಳು ಹತ್ತನೆ ತರಗತಿಗೆ ಬಂದಾಗ ಮಾತ್ರ
ಫಲಿತಾಂಶ ಸುಧಾರಣೆಯತ್ತ ಗಮನ ಕೊಡುವ ಬದಲು ಎಂಟನೆ ತರಗತಿಯಿಂದಲೆ ಮಕ್ಕಳನ್ನು ಪರೀಕ್ಷೆಗೆ ತಯಾರು ಮಾಡುವ ಕೆಲಸವಾಗಬೇಕು. ಎಲ್ಲಾ ಮಕ್ಕಳಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆಯಿರುತ್ತದೆ. ಅದನ್ನು ಗುರುತಿಸುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರುಗಳ ಮೇಲಿದೆ ಎಂದು ಹೇಳಿದರು.
ಗಣಿತ ಹೊರತುಪಡಿಸಿದರೆ ಎರಡನೆಯದು ಇಂಗ್ಲಿಷ್ ಕಷ್ಠ ಎನ್ನುವ ಭಯವನ್ನು ಮಕ್ಕಳ ಮನಸ್ಸಿನಿಂದ ತೆಗೆಯಬೇಕಿರುವುದರಿಂದ ಶಿಕ್ಷಕರುಗಳು ಮಕ್ಕಳ
ಮನೋಸಾಮಥ್ರ್ಯ ಅರಿತು ಮನಸ್ಸಿಗೆ ನಾಟುವ ರೀತಿಯಲ್ಲಿ ಇಂಗ್ಲಿಷ್ ಬೋಧಿಸಬೇಕು. ಪದ, ವಾಕ್ಯ, ವ್ಯಾಕರಣದ ಜೊತೆ ಸುಲಭವಾಗಿ ಇಂಗ್ಲಿಷ್ ಭಾಷೆಯನ್ನು ಮಕ್ಕಳಿಗೆ ಕಲಿಸಬೇಕಿದೆ. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಫಲಿತಾಂಶದಲ್ಲಿ ಸುಧಾರಣೆ ಸಾಧ್ಯ. ಇಂದಿನ ದಿನಗಳಲ್ಲಿ ಬರವಣಿಗೆಯೇ ಮಕ್ಕಳಲ್ಲಿ ಕಡಿಮೆಯಾಗುತ್ತಿದೆ. ಶಿಕ್ಷಣದ ಜೊತೆ ಸೃಜನಶೀಲ ಕೌಶಲ್ಯವನ್ನು ಮಕ್ಕಳಿಗೆ ಕಲಿಸಬೇಕಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಡೆ ಹೆಚ್ಚಿನ ಗಮನ ಕೊಡುವಂತೆ ಶಿಕ್ಷಕರುಗಳಿಗೆ ಅಪರ ಜಿಲ್ಲಾಧಿಕಾರಿ ಕರೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಮಂಜುನಾಥ್ ಮಾತನಾಡಿ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕಾದರೆ ಭಾಷಾವಾರು ಕಾರ್ಯಾಗಾರಗಳು ಅನುಕೂಲವಾಗುತ್ತದೆ. ಗುಣಮಟ್ಟದ ಶಿಕ್ಷಣವನ್ನು ಶಾಲೆಗಳಲ್ಲಿ ಬೋಧಿಸಿ ಮಕ್ಕಳನ್ನು ಪರೀಕ್ಷೆಗೆ ಅಣಿಗೊಳಿಸಿದಾಗ ಫಲಿತಾಂಶದಲ್ಲಿ ಸುಧಾರಣೆ ಕಂಡುಕೊಳ್ಳಬಹುದು ಎಂದು ಶಿಕ್ಷಕರುಗಳಿಗೆ ತಾಕೀತು ಮಾಡಿದರು.
ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕ ಹನುಮಂತರಾಯಪ್ಪ ಮಾತನಾಡುತ್ತ ಶಾಲೆಗಳಲ್ಲಿ ಮಕ್ಕಳ ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸಿದಾಗ ಹತ್ತನೆ ತರಗತಿ ಫಲಿತಾಂಶದಲ್ಲಿ ಸುಧಾರಣೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಕಾರ್ಯಾಗಾರಗಳ ಮೂಲಕ ಮಕ್ಕಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂದು ತಯಾರು ಮಾಡುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾಧಿಕಾರಿಗಳಾದ ಎನ್.ಆರ್.ತಿಪ್ಪೇಸ್ವಾಮಿ, ಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಡಿ.ವೈ.ಪಿ.ಸಿ. ವೆಂಕಟೇಶ್, ವಿಷಯ ಪರಿವೀಕ್ಷಕರುಗಳಾದ ಶಿವಣ್ಣ, ಗೋವಿಂದಪ್ಪ, ಚಂದ್ರಣ್ಣ, ಪ್ರಶಾಂತ್, ಮಹಲಿಂಗಪ್ಪ, ಶಿವಣ್ಣ, ಸಂಪತ್, ಆಂಗ್ಲ ಭಾಷೆ ಶಿಕ್ಷಕರ ಕ್ಲಬ್ ಅಧ್ಯಕ್ಷ ಸಿ.ಬಿ.ಸಿದ್ದೇಶ್, ತಾಲ್ಲೂಕು ಅಧ್ಯಕ್ಷ ಎಸ್.ಗುರುಮೂರ್ತಿ, ಆಂಗ್ಲ ಭಾಷಾ ವಿಷಯ ಪರಿವೀಕ್ಷಕ ಹೆಚ್.ಟಿ.ಚಂದ್ರಣ್ಣ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ
ಕಾರ್ಯದರ್ಶಿ ಶ್ರೀನಿವಾಸ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ ಇನ್ನು ಅನೇಕರು ವೇದಿಕೆಯಲ್ಲಿದ್ದರು.
ಸಂಪನ್ಮೂಲ ವ್ಯಕ್ತಿ ಬೆಳಗಾಂನ ಅಲ್ತಾಫ್ ಜಹಾಂಗೀರ್ ಇಂಗ್ಲಿಷ್ ಪರೀಕ್ಷೆಗೆ ಮಕ್ಕಳನ್ನು ಯಾವ ರೀತಿ ತಯಾರು ಮಾಡಬೇಕೆಂಬುದರ ಕುರಿತು ಉಪನ್ಯಾಸ ನೀಡಿದರು.