ಪದವಿ ಮುಗಿಸಿರುವ ಅದೆಷ್ಟೋ ಅಭ್ಯರ್ಥಿಗಳು ಸೂಕ್ತ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗವಿಲ್ಲದೆ ಅಲೆದಾಡುತ್ತಿರುತ್ತಾರೆ. ಇದೀಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಕೇಳಿಬಂದಿದೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ನೂರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶೇಷವೆಂದರೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಂಭತ್ತೈದು ಸಾವಿರ ರೂಪಾಯಿಗಳಿಗಿಂತ ಹೆಚ್ಚಿನ ವೇತನ ಸಿಗಲಿದೆ.
ಅರ್ಜಿ ಸಲ್ಲಿಸಲು ಫೆ.೨೮ ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಈ ನೇಮಕಾತಿಯಡಿಯಲ್ಲಿ ವಿವಿಧ ರಾಜ್ಯಗಳಲ್ಲಿ ನೂರ ಹತ್ತಕ್ಕೂ ಹೆಚ್ಚು ಹುದ್ದೆಗಳಿವೆ. ಅರಯಣಾಚಲ, ಅಸ್ಸಾಂ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ನೇಮಕಾತಿ ನಡೆಯುತ್ತದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವಯಸ್ಸು ಇಪ್ಪತ್ತರಿಂದ ಮೂವತ್ತರ ಒಳಗಿರಬೇಕು.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸ್ಕ್ರೀನಿಂಗ್, ವೈಯಕ್ತಿಕ ಸಂದರ್ಶನ ಮತ್ತು ಸ್ಥಳೀಯ ಭಾಷೆಯ ಪ್ರಾವೀಣ್ಯತೆಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವಾಗ ಪೋಟೋ, ಸಹಿ, ಶೈಕ್ಷಣಿಕ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.