ಮುಂಬೈ : ಆಸ್ಟ್ರೇಲಿಯಾದಲ್ಲಿ ತನ್ನ ಚಾಣಾಕ್ಷ ಬೌಲಿಂಗ್ ಮೂಲಕ ವಿಕೆಟ್ಗಳನ್ನು ಪಡೆಯುತ್ತಿರುವ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಈ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲೂ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.
ಈ ವರ್ಷದ ಕೊನೆಯ ಪಂದ್ಯದಲ್ಲೂ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ ಬುಮ್ರಾ ಒಟ್ಟು 9 ವಿಕೆಟ್ ಪಡೆಯುವ ಮೂಲಕ ಈ ವರ್ಷವನ್ನು ಮುಗಿಸಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಬುಮ್ರಾ ಅವರನ್ನು ಐಸಿಸಿ ಅತಿದೊಡ್ಡ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ವರ್ಷದ ಅತ್ಯುತ್ತಮ ಕ್ರಿಕೆಟಿಗನಿಗೆ ನೀಡುವ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಗೆ ಬುಮ್ರಾ ಅವರನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ. ಪರ್ತ್, ಅಡಿಲೇಡ್ ಮತ್ತು ಬ್ರಿಸ್ಬೇನ್ ನಂತರ, ಇದೀಗ ಮೆಲ್ಬೋರ್ನ್ನಲ್ಲಿಯೂ ಬುಮ್ರಾ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳಿಗೆ ಸಿಂಹಸ್ವಪ್ನವಾಗಿದ್ದರು.
ಅವರ ಪ್ರದರ್ಶನದಿಂದ ಟೀಂ ಇಂಡಿಯಾವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗದಿದ್ದರೂ, ಸ್ಟಾರ್ ಬೌಲರ್ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಇಡೀ ವಿಶ್ವ ಕ್ರಿಕೆಟ್ನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಬುಮ್ರಾ ಅವರ ಸಾಧನೆಯನ್ನು ಪರಿಗಣಿಸಿರುವ ಐಸಿಸಿ ಪ್ರಮುಖ 2 ಪ್ರಶಸ್ತಿಗಳಿಗೆ ಬುಮ್ರಾರನ್ನು ನಾಮನಿರ್ದೇಶನ ಮಾಡಿದೆ.
ಇದೀಗ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಬುಮ್ರಾ ಇದರ ಜೊತೆಗೆ ವರ್ಷದ ಅತ್ಯುತ್ತಮ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೂ ನಾಮನಿರ್ದೇಶನಗೊಂಡಿದ್ದಾರೆ.