ಬೆಂಗಳೂರು : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿ ಮೀರಿದೆ. ಸಿಬ್ಬಂದಿ ಕಿರುಕುಳಕ್ಕೆ ಸಾಲ ಪಡೆದುಕೊಂಡುವರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಈ ಮೈಕ್ರೊ ಫೈನಾನ್ಸ್ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಕೊನೆಗೂ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟದಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.
ಸುಗ್ರೀವಾಜ್ಞೆಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ನಿರ್ಧರಿಸಿದೆ. ಇನ್ನು ಮೈಕ್ರೋಫೈನಾನ್ಸ್ ವಿಚಾರದ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ಕ್ಯಾಬಿನೆಟ್ ಸಿಎಂಗೆ ನಿರ್ಣಯ ಕೈಗೊಳ್ಳುವ ಪರಮಾಧಿಕಾರ ನೀಡಿದ್ದು, ಕೆಲವು ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ.
ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್, ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.