ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗವನ್ನು ರಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 8 ನೇ ವೇತನ ಆಯೋಗವನ್ನು ರಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.ಆಯೋಗಕ್ಕೆ ಶೀಘ್ರದಲ್ಲೇ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರವು ಪ್ರತಿ 10 ವರ್ಷಕ್ಕೊಮ್ಮೆ ತನ್ನ ಉದ್ಯೋಗಿಗಳ ವೇತನವನ್ನು ಪರಿಷ್ಕರಿಸಲು ವೇತನ ಆಯೋಗವನ್ನು ರಚಿಸುತ್ತದೆ.