ಚಿತ್ರದುರ್ಗ: ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಎನ್.ಜಿ.ಓ ಸಂಸ್ಥೆಗಳು ಹೊಸ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬುಟಕಟ್ಟು ಸಚಿವಾಲಯದ ಎನ್.ಜಿ.ಓ ಪೊರ್ಟಲ್ ngo.tribal.gov.in ನಲ್ಲಿ ಪರಿಷ್ಕøತ ಮಾರ್ಗಸೂಚಿಯಂತೆ ಸ್ವಯಂ ಸೇವಾ ಸಂಸ್ಥೆಗಳು ಫೆ.15ರ ಒಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

































