ಬೆಂಗಳೂರು: ಕನ್ನಡ, ಇಂಗ್ಲೀಷ್ ಹಾಗೂ ಇತರೆ ಭಾಷೆಗಳಲ್ಲಿ ಪ್ರಥಮ ಬಾರಿಗೆ ಮುದ್ರಣಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿ, ಮಕ್ಕಳ ಸಾಹಿತ್ಯ ಹಾಗೂ ನವಸಾಕ್ಷರರ ಕೃತಿಗಳ ಆಯ್ಕೆಗಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯದಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2023ನೇ ಸಾಲಿನಲ್ಲಿ ಪಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಅರ್ಜಿ ಅಹ್ವಾನಿಸದ್ದು, 2023 ಜನವರಿ 1 ರಿಂದ 2023 ಜೂನ್ 30 ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳ ಲೇಖಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳೂ, ಆಯ್ಕೆ ವಿಧಾನ, ಅರ್ಜಿ ನಮೂನೆಗಳ ಮಾಹಿತಿಗಾಗಿ www.dpl.karnataka.gov.in ವೆಬ್‍ಸೈಟ್ ಸಂಪರ್ಕಿಸಬಹುದು. ಅರ್ಜಿಗಳು ಎಲ್ಲಾ ಜಿಲ್ಲಾ ಹಾಗೂ ನಗರ ಗ್ರಂಥಾಲಯಗಳಲ್ಲಿಯೂ ದೊರಯಲಿವೆ ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.